Thursday, July 23, 2026
Homeಕ್ರೈಂವಿಜಯಪುರ ; ಭೀಮಾತೀರದಲ್ಲಿ ಗುಂಡಿನ ದಾಳಿ : ಹಾಡಹಗಲೇ ರೌಡಿಶೀಟರ್ ಬಿಜೆಪಿ ಪುರಸಭೆ ಸದಸ್ಯೆಯ ಪತಿಯ...

ವಿಜಯಪುರ ; ಭೀಮಾತೀರದಲ್ಲಿ ಗುಂಡಿನ ದಾಳಿ : ಹಾಡಹಗಲೇ ರೌಡಿಶೀಟರ್ ಬಿಜೆಪಿ ಪುರಸಭೆ ಸದಸ್ಯೆಯ ಪತಿಯ ಹತ್ಯೆ.!

ವಿಜಯಪುರ ; ಭೀಮಾ ತೀರದಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ವಿಜಯಪುರ ‌ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ‌.ವಿಜಯಪುರ ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್​​ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮನೆಯಿಂದ ಚಡಚಣ ಪಟ್ಟಣಕ್ಕೆ ತೆರಳುತ್ತಿದ್ದಾಗ ಹಂತಕರು ದಾಳಿ ನಡೆಸಿದ್ದಾರೆ.

ಅಶೋಕ ಮಲ್ಲಪ್ಪ ಗಂಟಗಲ್ಲ ಮೇಲೆ ಗುಂಡಿನ ದಾಳಿ ನಡೆದಿದೆ. ಮನೆಯ ಬಳಿ ಇದ್ದಾಗ ಗುಂಡಿನ ದಾಳಿ ನಡೆಸಿದ ಅಪರಿಚಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರೌಡಿ ಶೀಟರ್ ಆಗಿದ್ದ ಅಶೋಕ ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡುಗಳು ತಾಗಿದ್ದು ಇನ್ನೂ ಗುಂಡಿನ ದಾಳಿಯಿಂದ ಸ್ಥಳದಲ್ಲೇ ಅಶೋಕ ಮೃತಪಟ್ಟಿದ್ದಾನೆ.

ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದ ಅಶೋಕ, ಕೊಲೆ ಹಾಗೂ ಇತರೆ ಕೇಸ್ ಗಳಲ್ಲಿ ಅಪರಾಧಿ ಯಾಗಿದ್ದ. ಅಶೋಕ ಮೇಲಿನ ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ವ್ಯಕ್ತವಾಗಿದೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ಪುರಸಭೆ ವಾರ್ಡ್ ನಂಬರ್ 2 ರ ಬಿಜೆಪಿ ಸದಸ್ಯೆಯಾಗಿದ್ದಾರೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular