ಶಿರಾ : ಗೋವಾ ಕಡೆ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಡಿವೈಡರ್‌ಗೆ ಗುದ್ದಿ, ಬಸ್ನಲ್ಲಿದ್ದ ಸ್ಥಳದಲ್ಲಿ ಎರಡು ಸಾವು ಆಸ್ಪತ್ರೆಯಲ್ಲಿ ಒಂದು ಸಾವು ಹಾಗೂಸುಮಾರು 14 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾ ಸಮೀಪನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಶಿರಾ ಮತ್ತು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಡಿವೈಡರ್ ನಿಂದ ಮತ್ತೊಂದು ರಸ್ತೆಗೆ ಬಿದ್ದಿದುಬಸ್ಸಿನಲ್ಲಿದ್ದ ಹಲವಾರು ಜನರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗಿನ ಜಾವ ಸುಮಾರು 4 .30ರ ಸಮಯದಲ್ಲಿ ತುಮಕೂರು ಜಿಲ್ಲೆಯ ಶಿರಾ ರಾಷ್ಟ್ರೀಯ ಹೆದ್ದಾರಿ 48 ಕಳ್ಳಂಬೆಳ್ಳ ಠಾಣೆ ವ್ಯಾಪ್ತಿಯ ಚಿಕ್ಕನಹಳ್ಳಿ ಬಳಿ ನಡೆದಿದೆ. ಬಹುತೇಕ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಯತ್ತಿದ್ದಾರೆ. ಇನ್ನೂ ಸ್ಥಳದಲ್ಲಿ ಮೃತಪಟ್ಟವರನ್ನು ಊರ್ವಿ, ಪ್ರಿಯಾಂಕಾ ಎಂದು ತಿಳಿದುಬಂದಿದೆ .
ಗಂಭೀರ ಗಾಯಗೊಂಡ ರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆ ನಡೆದ ವೇಳೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾಸ್ದಳಕ್ಕೆ ತುಮಕೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಶಿರಾ ಉಪ ವಿಭಾಗದ ಡಿ.ಎಸ್.ಪಿ ಬಿ.ಕೆ ಶೇಖರ್ ಮತ್ತಿತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬರುತ್ತದೆ.
ಬಸ್ ನಲ್ಲಿ 29 ಜನರು ಪ್ರಯಾಣಿಸುತ್ತಿದ್ದರು.
ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


