Thursday, October 8, 2026
Homeರಾಜ್ಯಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ; ಚಾಲಕ–ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ; ಚಾಲಕ–ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು.!

ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಬಾಳು ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಡ್ರೀಮ್ ಖಾಸಗಿ ಬಸ್‌ನಲ್ಲಿ ಮುಂಜಾನೆ 5.45ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರಿಂದ, ಸಾಗರದತ್ತ ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಬಸ್‌ನ ಶೇ.80ರಷ್ಟು ಭಾಗ ಸುಟ್ಟು ಭಸ್ಮವಾಗಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಆನಂದಪುರ ಠಾಣೆಯ PSI ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular