Monday, August 10, 2026
Homeರಾಜ್ಯಶಿವಮೊಗ್ಗ : ಚೆಸ್ ಆಟ ನೋಡುತ್ತಲೇ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು.

ಶಿವಮೊಗ್ಗ : ಚೆಸ್ ಆಟ ನೋಡುತ್ತಲೇ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು.

ಶಿವಮೊಗ್ಗ : ಶಾಲೆಯಲ್ಲಿ ಚೆಸ್ ಆಟ ವೀಕ್ಷಿಸುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ವಿನಯ್ ಜೆ.ಕೆ. (15) ಎಂದು ಗುರುತಿಸಲಾಗಿದೆ. ವಿನಯ್ ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಶಾಲೆಯಲ್ಲಿ ಚೆಸ್ ಆಟ ನಡೆಯುತ್ತಿದ್ದ ವೇಳೆ ಅದನ್ನು ನೋಡುತ್ತಾ ಕುಳಿತಿದ್ದ ವಿನಯ್, ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಹಾಗೂ ಪೋಷಕರು ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ವಿನಯ್ ಉಸಿರು ನಿಲ್ಲಿಸಿದ್ದಾನೆ ಎಂದು ತಿಳಿದುಬಂದಿದೆ.

ವಿನಯ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾರ್ಥಿಯ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದೆ.

ವಿನಯ್ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಆತನ ತಂದೆ-ತಾಯಿ ಶಿಕಾರಿಪುರದವರು ಎಂದು ತಿಳಿಸುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular