ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ 12 ಯುವಕರ ತಂಡದಲ್ಲಿ ಯುವಕನೋರ್ವ ಕಾಲುಜಾರಿ ಬಿದ್ದು ಪ್ರಸಾವನಪ್ಪಿದ ಘಟನೆ ವರದಿಯಾಗಿದೆ.
ಪಾಲ್ಸ್ ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಬಿದ್ದ ಯುವಕನನ್ನು ಬಳ್ಳಾರಿ ಮೂಲದ ವಿನೋದ್ (26) ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸೆಲ್ಫಿ ಹುಚ್ಚು ಹೆಚ್ಚಾಗಿ ಅನೇಕ ದುರಂತ ಸಂಭವಿಸಿದ್ದು ಅನೇಕರು ಸಾವನಪ್ಪಿದ ಘಟನೆ ಹೆಚ್ಚಾಗುತ್ತಿದೆ .ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.