Thursday, December 12, 2024
Flats for sale
Homeರಾಜ್ಯಶಿವಮೊಗ್ಗ : ಪೋಷಕರು ಬೈದಿದಕ್ಕೆ 3ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು !

ಶಿವಮೊಗ್ಗ : ಪೋಷಕರು ಬೈದಿದಕ್ಕೆ 3ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು !

ಶಿವಮೊಗ್ಗ : ಪೋಷಕರು ಬೈದಿದಕ್ಕೆ 3ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ.

ಪ್ರೀತಂ (10) ಮೃತ ಬಾಲಕ. ಈತ ಬೆಜ್ಜವಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಭಾನುವಾರ ಸಂಜೆ ಮನೆಯಲ್ಲಿ ಯಾವುದೋ ಕಾರಣಕ್ಕೆ ಪೋಷಕರು ಬೈದಿದ್ದರು ಅದರಿಂದಾಗಿ ಮನನೊಂದು ಪ್ರೀತಂ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ವಿಚಾರದ ಬಗ್ಗೆ ಪೊಲೀಸರು ಕೇಸ್‌ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ನಿಖರವಾದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular