Friday, March 13, 2026
Flats for sale
Homeಜಿಲ್ಲೆಶಿವಮೊಗ್ಗ : ಭಾರಿ ಮಳೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ,ಆತಂಕದಲ್ಲಿ ವಾಹನ ಚಾಲಕರು.

ಶಿವಮೊಗ್ಗ : ಭಾರಿ ಮಳೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ,ಆತಂಕದಲ್ಲಿ ವಾಹನ ಚಾಲಕರು.

ಶಿವಮೊಗ್ಗ : ಭಾರಿ ಮಳೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕವ್ಯಕ್ತವಾಗಿದೆ. ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಗೆ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಗುಡ್ಡ ಕುಸಿದಿದೆ ರಸ್ತೆ ಮೇಲೆ ಗುಡ್ಡದ ಮಣ್ಣು ಬಿದ್ದ ಪರಿಣಾಮ ವಾಹನ ಚಾಲಕರು ಆತಂಕದಲ್ಲಿದ್ದಾರೆ.

ಗುಡ್ಡ ಮತ್ತಷ್ಟು ಕುಸಿದರೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆವಿದ್ದು ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಈ ಹಿಂದೆಯು ಘಾಟಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತುಇದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮಳೆಗಾಲ ಆರಂಭವಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈಗ ಗುಡ್ಡ ಕುಸಿತದಿಂದ ಉಳಿದ ವಾಹನಗಳ ಸಂಚಾರವು ಸ್ಥಗಿತಗೊಳ್ಳುವ ಭೀತಿಯಿದೆ . ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌದಹಿಸಿದ್ದು ಗುಡ್ಡದ ಮಣ್ಣು ತೆರವು ಕಾರ್ಯಶುರುವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular