Thursday, July 23, 2026
Homeರಾಜ್ಯಶಿವಮೊಗ್ಗ : ಶಿಕಾರಿಪುರದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಯುವಕರು ಸಾವು.

ಶಿವಮೊಗ್ಗ : ಶಿಕಾರಿಪುರದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಯುವಕರು ಸಾವು.

ಶಿವಮೊಗ್ಗ : ಹಾವೇರಿ ಅಪಘಾತದ ಸುದ್ದಿ ಮಾಸುವ ಮುನ್ನವೇ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದ ಬಳಿ ಮಧ್ಯರಾತ್ರಿ 12.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಆ್ಯಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಶಿವಮೊಗ್ಗ ಕಡೆಯಿಂದ ಹೊರಟಿದ್ದ ಮಾಸೂರು ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಮತ್ತು ಶಿಕಾರಿಪುರ ಮಾರ್ಗದಿಂದ ಆಗಮಿಸುತ್ತಿದ್ದ ಬೈಕ್ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಸೇರಿದಂತೆ ಮೂವರು ಸ್ಥಳದಲ್ಲಿಯೇ ‌ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular