Thursday, March 12, 2026
Flats for sale
Homeದೇಶಶ್ರೀನಗರ : ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್‌ನಲ್ಲಿ ನಾಪತ್ತೆಯಾಗಿದ್ದ ಯೋಧನ ಹತ್ಯೆ ಶವ ಪತ್ತೆ.

ಶ್ರೀನಗರ : ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್‌ನಲ್ಲಿ ನಾಪತ್ತೆಯಾಗಿದ್ದ ಯೋಧನ ಹತ್ಯೆ ಶವ ಪತ್ತೆ.

ಶ್ರೀನಗರ : ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್‌ನಲ್ಲಿ ನಾಪತ್ತೆಯಾಗಿದ್ದ ಪ್ರಾದೇಶಿಕ ಯೋಧನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಯೋಧನ ಶವ ಉತ್ರಾಸು ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಆತನ ದೇಹದಲ್ಲಿ ಹಲವು ಗುಂಡಿನ ಗುರುತುಗಳು ಪತ್ತೆಯಾಗಿವೆ.

ಯೋಧನನ್ನು ಅನಂತನಾಗ್‌ನ ಮುಖದಂಪೋರಾ ನೌಗಂ ನಿವಾಸಿ ಹಿಲಾಲ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಸೇನೆ, ಪೊಲೀಸರು ಹಾಗೂ ಅರಣ್ಯ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಯೋಧ ನಾಪತ್ತೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ನಿನ್ನೆ ರಾತ್ರಿಯಿಂದ ಸೇನೆ ಆತನಿಗಾಗಿ ಹುಡುಕಾಟ ನಡೆಸಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಯೋಧನ ಪತ್ತೆಗೆ ಭದ್ರತಾ ಪಡೆಗಳು ಭಾರಿ ಯೋಧ ಕಾರ್ಯಾಚರಣೆ ನಡೆಸಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular