ಸಕಲೇಶಪುರ : ಚಾಲಕನ ನಿಯಂತ್ರಣ ತಪ್ಪಿದ ಕಾರು ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಫಾಲ್ಸ್ ಗೆ ಧುಮುಕಿದೆ. ಬೆಂಗಳೂರು ಮೂಲದ ಪ್ರವಾಸಿಗರಿದ್ದ ಮಾರುತಿ ಸ್ವಿಫ್ಟ್ ಕಾರು ಪಾಲ್ಸ್ ಗೆ ಧುಮುಕಿದೆ,ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಕಲೇಶಪುರ ತಾಲೂಕಿನ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ಕಾರಣ ಶಿರಾಡಿಘಾಟ್ ಬಳಿ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಿಬೇಕಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ.