Saturday, March 7, 2026
Flats for sale
Homeಕ್ರೈಂಬೆಂಗಳೂರು : ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ,ವಿಕ್ಟೋರಿಯಾ ಆಸ್ಪತ್ರೆಗೆ...

ಬೆಂಗಳೂರು : ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ,ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು.

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಬೆಳಗ್ಗೆ ವಿಚಾರಣೆ ನಡೆಸುತ್ತಿದ್ದ ವೇಳೆ ಚೈತ್ರಾ ಅವರು ಕುಸಿದು ಬಿದ್ದರು. ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಚೈತ್ರಾ ಅವರನ್ನು ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಪೊಲೀಸ್ ವಿಚಾರಣೆಗಾಗಿ ಬೆಳಗ್ಗೆ ಅವರನ್ನು ಸಿಸಿಬಿ ಕಚೇರಿಗೆ ಕರೆದು ತರಲಾಗಿತ್ತು.

ಈ ಪ್ರಕರಣದಲ್ಲಿ ಇನ್ನೊಬ್ಬ ಅಪರಾಧಿಯನ್ನು ಬಂಧಿಸಲಾಗಿದೆ ಈ ನಡುವೆ ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಹೊರಗಡೆ ಬರಲಿದೆ ಎಂದು ಚೈತ್ರಾ ಕುಂದಾಪುರ ಮಾಧ್ಯಮದ ಮುಂದೆ ದೊಡ್ಡ ದನಿಯಲ್ಲಿಯೇ ಮೊದಲ ಪ್ರತಿಕ್ರಿಯೆ ನೀಡಿದ್ದರು. ಬೆಂಗಳೂರಿನಲ್ಲಿ ಮಹಿಳಾ ಸಾಂತ್ವನ ಕೇಂದ್ರದಿ0ದ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ವಾಹನ ಇಳಿಯುತ್ತಲೇ ಮಾಧ್ಯಮದವರನ್ನು ಕಂಡ ಕೂಡಲೇ ಸ್ವಾಮೀಜಿ ಬಂಧನವಾದರೆ ಬಳಿಕ ದೊಡ್ಡವರ ಹೆಸರು ಬರಲಿದೆ. ಇಂದಿರಾ ಕ್ಯಾAಟೀನ್ ಬಿಲ್ ಪೆಡಿಂಗ್ ಇರುವ ಕಾರಣ ಷಡ್ಯಂತ್ರ ರೂಪಿಸಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆರೋಪ ಮಾಡಿದ್ದಾಳೆ.

ಸಿಸಿಬಿ ಪೊಲೀಸರು ಬುಧವಾರ ಉಡುಪಿಯಲ್ಲಿ ಚೈತ್ರಾಳನ್ನು ಬಂಧಿಸಿ ಬೆಂಗಳೂರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಸೆಪ್ಟೆಂಬರ್ ೨೩ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರಿAದ ಚೈತ್ರಾಳನನು ಮಹಿಳಾ ಸಾಂತ್ವನ ಕೇAದ್ರಕ್ಕೆ ಕಳುಹಿಸಿದ್ದರು. ಗುರುವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆದುಕೊಂಡು ಬಂದುವ ವಿಚಾರಣೆ ನಡೆಸಿ ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ಹಣ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಈಗಾಗಲೇ ಉಡುಪಿ, ಚಿಕ್ಕಮಗಳೂರು, ಕಲಬುರ್ಗಿ ಹಾಗೂ ನಗರದ ಕೆಲ ಭಾಗದಲ್ಲಿ ಮಹಜರು ನಡೆಸಲಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆ ಮೇಲೆ ಕಣ್ಣಿಟ್ಟಿದ್ದು, ಖಾತೆಗಳನ್ನು ಫ್ರೀಜ್ ಮಾಡುವ ಸಾಧ್ಯತೆ ಇದೆ.

ಇದೇ ವೇಳೆ ಚೈತ್ರಾ ಕುಂದಾಪುರ ವಕೀಲ ರಮಣಪ್ಪ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಚೈತ್ರ ಕುಂದಾಪುರ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ. ಚೈತ್ರ ಕುಂದಾಪುರ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಇದು ಸಂಪೂರ್ಣ ರಾಜಕೀಯ ಪ್ರೇರಿತ ಪ್ರಕರಣವಾಗಿದೆ ಎಂದು ದೂರಿದ್ದಾರೆ.

ಚೈತ್ರಾ ಕುAದಾಪುರ ಬಾAಬ್ಗೋ ವಿAದಬಾಬು ಪೂಜಾರಿ ವಿಚಾರಣೆ ವಿಧಾನಸಭೆ ಟಿಕೆಟ್‌ಗಾಗಿ ೫ ಕೋಟಿ ರೂ. ನೀಡಿರುವ ಗೋವಿಂದಬಾಬು ಪೂಜಾರಿ ಕೂಡಾ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ತಾವು ಯರ‍್ಯಾರಿಗೆ ಎಷ್ಟು ಹಣವನ್ನು ಯಾವಾಗ ನೀಡಲಾಗಿತ್ತು ಎಂಬ ಮಾಹಿತಿಯನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಇನ್ನೋರ್ವ ಆರೋಪಿ ಬಂಧನ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಇನ್ನೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಶವAತಪರ ಬಳಿ ಚನ್ನನಾಯ್ಕ ಎಂಬಾತನನ್ನು ಬAಧಿಸಲಾಗಿದ್ದು ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular