ಸುಬ್ರಹ್ಮಣ್ಯ : ಕಳೆದ ಹಲವುದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಕಳೆದ ಮೂರು ದಿನಗಳಿಂದ ಕೊಂಚ ವಿರಾಮ ನೀಡಿದೆ. ಆದರೆ ಮಳೆ ಕಡಿಮೆ ಆಗಿದ್ರೂ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟದಲ್ಲಿ ಯಾವುದೇ ಇಳಿಕೆಯಾಗಿಲ್ಲ. ಬಂಟ್ವಾಳ ತಾಲೂಕಿನ ಕೆಲವೊಂದು ತಗ್ಗು ಪ್ರದೇಶ ನದಿ ನೀರಿನಿಂದ ಜಲಾವೃತಗೊಂಡಿದೆ.ನೆರೆಯ ಭೀತಿಯ ಹಿನ್ನೆಲೆ ಸ್ಥಳೀಯ ನಿವಾಸಿಗಳನ್ನು ಕೂಡ ಸ್ಥಳಾಂತರಿಸಲಾಗಿದೆ .
ಈ ಬಾರಿಯ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಸಾವುನೋವು ಸಂಭವಿಸಿದೆ. ಕರಾವಳಿಯಲ್ಲಿ ಮಳೆ ಆಗುತ್ತಿಲ್ಲವಾದ್ರೂ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದುಇದರಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಧರ್ಮಸ್ಥಳದಲ್ಲಿ ಹರಿಯುತ್ತಿರುವ ನೇತ್ರಾವತಿ ಸ್ನಾನಘಟ್ಟದಲ್ಲಿ ಉಕ್ಕಿ ಹರಿಯುತ್ತಿದೆ. ಸ್ನಾನಘಟ್ಟದಲ್ಲಿ ಅಪಾಯದ ಮಟ್ಟದಲ್ಲಿರುವ ನೇತ್ರಾವತಿಯ ಹರಿವಿನಿಂದ ಹೆಚ್ಚಿನ ಭದ್ರತೆ ಮಾಡಲಾಗಿದೆ. ಪ್ರವಾಸಿಗರು ಇಲ್ಲಿ ತೀರ್ಥ ಸ್ನಾನ ಮಾಡಲು ನದಿಗೆ ಇಳಿಯದಂತೆ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ.