ಸುಬ್ರಹ್ಮಣ್ಯ ; ರಾಜಕೀಯ ಅಂದರೆ ಮನಸ್ಥಾಪ ಅಸಮಾಧಾನಗಳು ಎಲ್ಲಾ ಇರುತ್ತೆ ಅಮೇಲೆ ಸರಿಯಾಗುತ್ತೆ ಎಂದು ಹೇಳುವ ಮೂಲಕ ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಹಾಗೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ದೇಶದಲ್ಲಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತೊಮ್ಮೆ ಮೋದಿಜಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ಕಳೆದ ಬಾರಿಗಿಂತ ಆಧಿಕ ಸೀಟು ಪಡೆಯಲಿದೆ ಎಂದು ಹೇಳಿದರು. ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಸಿಆರ್ಐ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಅದಕ್ಕೆ ಬದ್ಧರಾಗಿದ್ದೇವೆ ಎಂದರು. ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದರು.


