Friday, October 24, 2025
Flats for sale
Homeಜಿಲ್ಲೆಸುಳ್ಯ ; ಕಾಡು ಪ್ರಾಣಿಗಳನ್ನು ಬೇಟೆಯಾಡಿ ಪದಾರ್ಥ ಮಾಡುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ: ಮೂವರು ಎಸ್ಕೇಪ್...

ಸುಳ್ಯ ; ಕಾಡು ಪ್ರಾಣಿಗಳನ್ನು ಬೇಟೆಯಾಡಿ ಪದಾರ್ಥ ಮಾಡುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ: ಮೂವರು ಎಸ್ಕೇಪ್ , ಬಾಣಲೆ ಸಹಿತ ಬೆಂದ ಮಾಂಸ ವಶಕ್ಕೆ.

ಸುಳ್ಯ : ತಂಡವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಖಾದ್ಯ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸುಳ್ಯ ಗಡಿ ಭಾಗದಿಂದ ವರದಿಯಾಗಿದೆ.

ಕೊಡಗು ಸಂಪಾಜೆ ವಲಯದ ದಬ್ಬಡ್ಕದ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆ ಮಾಡಿದ್ದರು ಎನ್ನಲಾಗಿದೆ. . ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ಮನೆಗಳಿಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರಣ್ಯಾಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮಹೋಮ್ಮದ್, ಗಸ್ತು ಅರಣ್ಯ ಪಾಲಕ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿಗಳಾದ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular