Tuesday, April 7, 2026
Flats for sale
Homeಜಿಲ್ಲೆಸುಳ್ಯ : ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ : ಆರೋಪಿಯ ಬಂಧನ.

ಸುಳ್ಯ : ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ : ಆರೋಪಿಯ ಬಂಧನ.

ಸುಳ್ಯ : ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 30, 2026ರಂದು ನಡೆದ ಈ ಘಟನೆಗೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026ರಡಿ BNS-2023 ಕಲಂ 303(2) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.ತನಿಖೆಯ ವೇಳೆ ಏಪ್ರಿಲ್ 6ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಬಂಧಿತನನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿತನಿಂದ ಕಳವು ಮಾಡಲಾಗಿದ್ದ ರೂ.2000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಪ್ರಕರಣದ ತನಿಖೆಯನ್ನು ಸುಳ್ಯ ಪೊಲೀಸ್ ಠಾಣೆ ಮುಂದುವರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular