ಸುಳ್ಯ : ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ-ಬಿಸಿಲೆ ಘಾಟ್ ರಸ್ತೆಯ ಶ್ರೀ ಚೌಡೇಶ್ವರಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯ ಹೊಂಡಕ್ಕೆ ಸಿಲುಕಿದ ಘಟನೆ ಭಾನುವಾರ ಆ.13ರಂದು ನಡೆದಿದೆ. ಬಸ್ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು. ಬಸ್ಸಿನ ಹಿಂಬದಿ ಹೊಂಡದಲ್ಲಿ ಸಿಲುಕಿಕೊಂಡಿದೆ. ಕ್ರೇನ್ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರೂ ಮಧ್ಯಾಹ್ನದವರೆಗೂ ಹಳ್ಳದಿಂದ ಬಸ್ ಮೇಲೆತ್ತಿಲ್ಲ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನೂ ಮಾಡಿಲ್ಲ. ಮಕ್ಕಳೊಂದಿಗೆ ವೈದ್ಯಕೀಯ ಚಿಕಿತ್ಸೆಗೆ ತೆರಳುತ್ತಿದ್ದ ಹಲವು ಪ್ರಯಾಣಿಕರು ಪರದಾಡಬೇಕಾಯಿತು. ಯಾವುದೇ ಕ್ರಮ ಕೈಗೊಳ್ಳದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಎರಡೂ ಬದಿಯಲ್ಲಿ ಕಿ.ಮೀ.ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಜೆ ಗುಂಡಿಯಿಂದ ಬಸ್ ತೆಗೆಯಲಾಯಿತು.


