ಸುಳ್ಯ : ಮಂಡ್ಯದ ನಾಲ್ವರು ಛಾಯಾಗ್ರಾಹಕರು ಹೊನ್ನಾವರದಲ್ಲಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಸಂಪಾಜೆ ಗೇಟ್ ಬಳಿ ಭೀಕರ ಕಾರು ಅಪಘಾತಕ್ಕೀಡಾಗಿದೆ.
ಅವರು ಪ್ರಯಾಣಿಸುತ್ತಿದ್ದ ಫೋಕ್ಸ್‌ವ್ಯಾಗನ್ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾತ್ಮಕ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಬ್ಬಿಣದ ರಕ್ಷಾಕವಚ ವಾಹನವನ್ನು ಒಳಗಿನ ಭಾಗಕ್ಕೆ ಕಾರು ಪ್ರವೇಶಿಸಿದೆ .
ಘಟನೆಯಲ್ಲಿ ಛಾಯಾಗ್ರಾಹಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.ಇನ್ನೂಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯ ಕುರಿತು ಸ್ಥಳೀಯ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


