ಮಂಗಳೂರು : ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಯುವತಿಯನ್ನು ಉಳ್ಳಾಲ ಸಮೀಪದ ಮಾಡೂರು ಬಾಡಿಗೆ ಮನೆಯ ನಿವಾಸಿ ( ) ಎಂದು ತಿಳ್ಯಲಾಗಿದೆ. ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿದ್ದಾರೆ. ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಯುವತಿಯ ಆತ್ಮಹತ್ಯೆಗೆ ನಿಖರ ಕರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು ಯುವತಿಯ ಆತ್ಮಹತ್ಯೆಗೆ ಕಾರಣ ಏನೆಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.


