Saturday, July 25, 2026
Homeರಾಜ್ಯಹಾವೇರಿ : ಅನ್ಯ ಕೋಮಿನ ಜೋಡಿಗಳ ಮೇಲೆ ದಾಳಿ,ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ, ಕಾರಿನಲ್ಲಿ...

ಹಾವೇರಿ : ಅನ್ಯ ಕೋಮಿನ ಜೋಡಿಗಳ ಮೇಲೆ ದಾಳಿ,ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ, ಕಾರಿನಲ್ಲಿ ಮಹಿಳೆಗೆ ಲೈಂಗಿಕ ಚಿತ್ರಹಿಂಸೆ ನೀಡುವ ಭಯಾನಕ ವಿಡಿಯೋ ವೈರಲ್.

ಹಾವೇರಿ : ನೈತಿಕ ಪೊಲೀಸಗಿರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆಗೆ ಇದೊಂದು ದೊಡ್ಡ ತಲೆನೋವಾಗಿದೆ. ಹಾವೇರಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬಂದಿದೆ ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಗವನ್ನು ಗಾಸಿ ಗೊಳಿಸಿ ಗ್ಯಾಂಗ್ ರೇಫ್ ಮಾಡಲು ವಿಫಲ ಯತ್ನ ನಡೆಸಿದ ಘಟನೆ ಎರಡು ದಿನದ ನಂತರ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಸೋಮವಾರ ಜ.08ರಂದು ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು,ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂದಲೇ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2 ವಿಡಿಯೋ ವೈರಲ್ ಆಗಿದೆ.

ಮುಸ್ಲಿಂ ಮಹಿಳೆಯರು, ಹುಡುಗಿಯರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಈ ಆರೋಪಿಗಳು ಹಿಂದೂ ಹುಡಗರ ಜೊತೆ ಕಾಣಿಸಿಕೊಂಡ ಮುಸ್ಲಿಂ ಹುಡುಗಿಯರು, ಮಹಿಳೆಯರನ್ನ ಟಾರ್ಗೆಟ್ ಮಾಡ್ತಿದ್ದರು. ಅಟ್ಯಾಕ್ ಮಾಡಿ ಹುಡುಗಿಯರನ್ನ ಎಳೆದೊಯ್ಯುತ್ತಿದ್ದರು. ಇದೀಗ ಎರಡನೇ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾನಗಲ್ ಜನರು ಬೆಚ್ಚಿ ಬಿದ್ದಿದ್ದಾರೆ.ನಂತರ ಕಾರ್ ನಲ್ಲಿ ಕೂರಿಸಿ ಲೈಂಗಿಕ ಚಿತ್ರಹಿಂಸೆ ಕೊಡುವ ವಿಡಿಯೋ ವೈರಲ್ ಆಗಿದೆ.

ಸಂತ್ರಸ್ತೆ ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿ ನನಗೆ ಐದಾರು ಅಪರಿಚಿತ ಯುವಕರು ನಾನು ತಂಗಿದ್ದ ಹೋಟೆಲ್ ಗೆ ನುಗ್ಗಿ ಹಲ್ಲೆ ಮಾಡಿ ನನ್ನ ಕಾಸಗಿ ಅಂಗಾಂಗಗಳನ್ನು ಗಾಸಿಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.ಹಾವೇರಿ ಎಸ್. ಪಿ ಅಂಶುಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೆವೆ. ಮಹಿಳೆ ಎಲ್ಲೂ ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಹೇಳಿಲ್ಲ. ವೈಧ್ಯಕೀಯ ತಪಾಸಣೆ ಮಾಡಿಸಿದ್ದೆವೆ. ಮುಂದಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular