Sunday, July 5, 2026
Homeರಾಜ್ಯಹಾವೇರಿ : ಚಲಿಸುತ್ತಿರುವ KSRTC ಬಸ್‌ಗೆ ದಿಢೀರ್‌ ಬೆಂಕಿ – ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

ಹಾವೇರಿ : ಚಲಿಸುತ್ತಿರುವ KSRTC ಬಸ್‌ಗೆ ದಿಢೀರ್‌ ಬೆಂಕಿ – ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ KSRTCಗೆ ಸೇರಿದ “ಪಲ್ಲಕ್ಕಿ” ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಗಳೂರುದಿಂದ ಗದಗ ನಗರಕ್ಕೆ ಪ್ರಯಾಣಿಸುತ್ತಿದ್ದ ಈ ಬಸ್‌ನಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಬ್ರೇಕ್ ಲೈನರ್‌ನಿಂದ ಉಂಟಾದ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್‌ಗೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ.

ಸ್ಥಿತಿ ಗಂಭೀರವಾಗುತ್ತಿದ್ದಂತೆಯೇ ಚಾಲಕ ಫಕ್ಕೀರಪ್ಪ ಅವರು ತಕ್ಷಣ ಕ್ರಮ ಕೈಗೊಂಡು ಬಸ್‌ನ ಗಾಜು ಒಡೆದು ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದರು. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular