Friday, November 22, 2024
Flats for sale
Homeರಾಜ್ಯಹಾವೇರಿ : ಮಗ ಯುವತಿಯೊಬ್ಬಳ ಜೊತೆಗೆ ಪರಾರಿ : ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಯುವತಿ...

ಹಾವೇರಿ : ಮಗ ಯುವತಿಯೊಬ್ಬಳ ಜೊತೆಗೆ ಪರಾರಿ : ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಯುವತಿ ಕಡೆಯವರು.

ಹಾವೇರಿ : ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರ ಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಕೃತ್ಯ ನಡೆದಿದೆ.

ರಾಣೆಬೆನ್ನೂರ ತಾಲೂಕಿನ ಅರಮಲ್ಲಾಪುರ ಗ್ರಾಮದ ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ.

ಈಕೆಯ ಮಗ ಅದೇ ಗ್ರಾಮದ ಯುವತಿಯೊಬ್ಬಳ ಜೊತೆಗೆ ಪರಾರಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಮಹಿಳೆಯ ಮೇಲೆ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಿಳೆಯ ಮಗ ಯುವತಿಯೊಬ್ಬಳನ್ನು ಅಪಹರಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಯುವತಿ ಕಡೆಯವರು ಥಳಿಸಿದ್ದಾರೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ , ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳೆಂದು ಗುರುತಿಸಲಾಗಿದೆ.

ಈಕೆಯ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ದೂರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular