Thursday, November 21, 2024
Flats for sale
Homeಕ್ರೈಂಹಾಸನ : ಇನ್ಶೂರೆನ್ಸ್ ಸಂಸ್ಥೆಯಿಂದ ಕೋಟಿ ಕೋಟಿ ಹಣ ಪೀಕಿಸಲು ಭಿಕ್ಷುಕನಿಗೆ ಅಪಘಾತಕ್ಕೊಳಪಡಿಸಿ ನಾಟಕವಾಡಿದ್ದ ದಂಪತಿ...

ಹಾಸನ : ಇನ್ಶೂರೆನ್ಸ್ ಸಂಸ್ಥೆಯಿಂದ ಕೋಟಿ ಕೋಟಿ ಹಣ ಪೀಕಿಸಲು ಭಿಕ್ಷುಕನಿಗೆ ಅಪಘಾತಕ್ಕೊಳಪಡಿಸಿ ನಾಟಕವಾಡಿದ್ದ ದಂಪತಿ ಬಂಧನ..!

ಹಾಸನ : ಜೀವವಿಮಾ ಸಂಸ್ಥೆಯಿಂದ ಪರಿಹಾರದ ಹಣ ಪೀಕಲು ಅಮಾಯಕನನ್ನು ಕೊಂದು ತಾನೇ ಅಪಘಾತದಲ್ಲಿ ಮೃತಪಟ್ಟಿರುವಂತೆ ಕ್ರೈಂ ಸೀಸ್ ಸೃಷ್ಟಿಸಿದ್ದ ಹತ್ಯೆ ಪ್ರಕರಣ ಹತ್ತು ದಿನಗಳ ನಂತರ ಬಯಲಾಗಿದ್ದು, ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.

ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಶ್ವಾಮಿಗೌಡ ಹಾಗೂ ಶಿಲ್ಪ ಬಂಧಿತ ದಂಪತಿ. ಅವರು ಕೊಲೆಗೈದಿದ್ದ ವ್ಯಕ್ತಿ ಓರ್ವ ಭಿಕ್ಷುಕ ಎನ್ನಲಾಗಿದ್ದು ಆತನ ಗುರುತು ಪತ್ತೆಗೆ ಪೊಲೀಸರು ತನಿಖೆ ಅರಂಭಿಸಿದ್ದಾರೆ.

ಆ.12 ರಂದು ಅರಸೀಕೆರೆ ತಾಲ್ಲೂಕಿನ ಗೊಲ್ಲರಹೊಸಳ್ಳಿ ಗೇಟ್ ಬಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಅದೇ ಸ್ಥಳದಲ್ಲಿ ಪಂಚರ್ ಆಗಿದ್ದ ಕಾರು ಹಾಗೂ ಒಂದು ಲಾರಿ ಸಿಕ್ಕಿದ್ದವು. ಮೇಲ್ನೋಟಕ್ಕೆ ಪಂಚರ್ ಆಗಿದ್ದ ಟೈರ್ ಬದಲಿಸುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಮೃತಪಟ್ಟಂತೆ ಕಾಣಿಸುತ್ತಿತ್ತು. ಅಪರಿಚಿತ ಮೃತ ದೇಹದನ್ನು ಹಾಸನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಗುರುತು ಪತ್ತೆಗೆ ಮುಂದಾಗಿದ್ದಾರೆ.

ಆ.13 ರಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ಶಿಲ್ಪರಾಣಿ ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಗುರುತಿಸಿದ್ದಳು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕೊಂಡೊಯ್ದಿದ್ದ ಆತ ಅಂದೇ ಹೊಸಕೂಟಿ ತಾಲ್ಲೂಕಿನ, ಚಿಕ್ಕಹೋಲಿಗ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಳು.

ಗಂಡಸಿ ಪೊಲೀಸ್ ಠಾಣೆಯಲ್ಲಿ ಬಿಎಸ್ಎಸ್ 304 ಅಡಿ ಪ್ರಕರಣ ದಾಖಲಾಗಿದ್ದು. ಮೃತ ವ್ಯಕ್ತಿಯ ಕುತ್ತಿಗೆಯಲ್ಲಿ ಗಾಯದ ಗುರುತು ಇದ್ದಿದ್ದರಿಂದ ಪ್ರಕರಣದ ಬಗ್ಗೆ ಅನುಮಾನಗೊಂಡು ಗಂಡಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣದ ಬಗ್ಗೆ ಎಸ್ಪಿ ಮಹಮದ್ ಸುಜೀತಾ ಮಾಹಿತಿ ನೀಡಿದ್ದು, ಗಂಡಸಿ ಹಾಗೂ ಅರಸೀಕೆರೆ ಮತ್ತು ಪೊಲೀಸರಿಗೆ ಆಘಾತಕಾರಿ ಅಂಶ ಬೆಳಕಿಗೆ ಬಂದಿತ್ತು.

ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಟೈರ್ ಮಾರಾಟ ಮಳಿಗೆ ಹೊಂದಿದ್ದ ಮುನಿಶಾಮಿಗೌಡ ಸಾಲದಲ್ಲಿ ಮುಳುಗಿ ಹೋಗಿದ್ದ. ಇದರಿಂದ ಪಾರಾಗಲು ದಾರಿ ಕಾಣದೇ ಒದ್ದಾಡುತ್ತಿದ್ದ. ಅತ ತನ್ನ ಮರಣಾನಂತರ ದೊರೆಯುವ ಜೀವವಿಮೆ ಹಣವನ್ನು ಬದುಕಿದ್ದಾಗಲೇ ಲಪಟಾಯಿಸಲು ಪತ್ನಿ ಜಡೆಗೂಡಿ ತಂತ್ರ ರೂಪಿಸಿದ್ದ. ಭಿಕ್ಷುಕನೊಬ್ಬನನ್ನು ಮಾತನಾಡಿಸಿ ವಿಶ್ವಾಸಕ್ಕೆ ಪಡೆದಿದ್ದ ಮುನಿಶಾಮಿಗೌಡ ತನ್ನೊಂದಿಗೆ ಕಾರಿನಲ್ಲಿ ಆತನನ್ನು ಕೂರಿಸಿಕೊಂಡು ಪ್ರಯಾಣ ಆರಂಭಿಸಿದ. ಮಾರ್ಗಮಧ್ಯೆ ಗೊಲ್ಲರ ಹೊಸಳ್ಳಿ ಗೇಟ್ ಬಳಿ ಕಾರಿನ ಚಕ್ರ ಪಂಚರ್ ಆಗಿದ್ದು ಚಕ್ರ ಬದಲಿಸುವಂತೆ ಭಿಕ್ಷುಕನಿಗೆ ಹೇಳಿದ್ದ. ಅದರಂತೆ ಆತ ಪಂಚರ್ ಆದ ಚಕ್ರ ಬಿಚ್ಚಲು ಕುಕ್ಕರುಗಾಲಿನಲ್ಲಿ ಕುಳಿತಿದ್ದಾಗ ಅತನ ಕುತ್ತಿಗೆಗೆ ಚೈನ್ ಹಾಕಿ ಎಳೆದು ರಸ್ತೆಗ ಬಿಳಿಸಿದ್ದ. ಆಗ ಆತನ ಸಂಚಿನಂತೆ ಹಿಂಬಾಲಿಸಿಕೊಂಡು ಬಂದಿದ್ದ ಲಾರಿ ಚಾಲಕ ದಾರಿಯಲ್ಲಿ ಬಿದ್ದವನ ಮೇಲೆ ಲಾರಿ ಹರಿಸಿ ಕೊಲೆಗೈದಿದ್ದ. ನಂತರ ಲಾರಿ, ಕಾರುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಮುನಿಶಾಮಿಗೌಡ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದ.

ಮುನಿಶಾಮಿಗೌಡನ ಸಂಬಂಧಿಕರಾದ ಶಿಡ್ಲಘಟ್ಟ ಸಿಪಿಐ ಶ್ರೀನಿವಾಸ್ ಕೂಡ ಆತ ಸತ್ತಿದ್ದಾನೆ ಎಂದು ಎಲ್ಲರಂತೆ ನಂಬಿ ಸಮಾಧಿಗೆ ಹೂವಿನ ಹಾರ ಹಾಕಿ ಬಂದಿದ್ದರು. ಅದರೆ ಅಜ್ಞಾತ ಸ್ಥಳದಲ್ಲಿದ್ದ ಮುನಿಶ್ವಾಮಿಗೌಡನಿಗೆ ಹೊರಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದೆ ಕಂಗಾಲಾಗಿದ್ದ. ಪಾಪ ಪ್ರಜ್ಞೆಯಿಂದ ಅಸ್ವಸ್ಥಗೊಂಡು ಒತ್ತಡ ತಡೆಯಯಲಾರದ ಶಿಡ್ಲಘಟ್ನ ಸಿಪಿಐ ಶ್ರೀನಿವಾಸ್ ಎದುರು ಹಾಜರಾಗಿದ್ದಾನೆ. ಮೃತಪಟ್ಟಿದ್ದ ಸಂಬಂಧಿ ಜೀವಂತವಾಗಿರುವುದನ್ನು ಕಂಡ ಸಿಪಿಐ ಅಚ್ಚರಿಗೊಂಡಿದ್ದಾನೆ. ಅವರಿಗೂ ಸುಳ್ಳು ಹೇಳಿದ ಆರೋಪಿ ತಾನು ಅಪಘಾತದಲ್ಲಿ ಕಾರು ಗುದ್ದಿಸಿದ್ದರಿಂದ ಭಿಕ್ಷುಕ ಮೃತಪಟ್ಟಿದ್ದಾನೆ ಎಂದು ಹೇಳಿದ್ದ. ಅತನ ಮಾತಿನಿಂದ ಅನುಮಾನಗೊಂಡು ಆಡವನ್ನು ಆರೋಪಿಯನ್ನು ಗಂಡಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅತ್ತ ಪತಿಯ ಸಾವಿನ ದುಃಖದಲ್ಲಿರುವಂತೆ ನಟಿಸುತ್ತಿದ್ದ ಶಿಲ್ಪಾ ಇದುವರೆವಿಗೂ ತನಿಖೆಗೆ ಸಹಕಾರ ನೀಡಿರಲಿಲ್ಲ. ಮುನಿಶ್ವಾಮಿಗೌಡ ತಮ್ಮ ವಶಕ್ಕೆ ಸಿಕ್ಕಿರುವ ವಿಷಯ ತಿಳಿಸದೇ ಪೊಲೀಸರು ವಿಚಾರಣೆ ನಡೆಸಿದಾಗ ಆಕೆ ನಾಟಕ ಮುಂದುವರೆಸಿದ್ದಳು. ತಕ್ಷಣ ಪೊಲೀಸರು ಆಕೆಯ ಪತಿಯನ್ನು ಮುಂದೆ ನಿಲ್ಲಿಸಿದಾಗ ಕಕ್ಕಾಬಿಕ್ಕಿಯಾಗಿ ಬಳಿಕ ಸತ್ಯ ಬಾಯಿಟ್ಟಿದ್ದಾಳೆ.

ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು ಈ ಖತರ್ನಾಕ್ ದಂಪತಿಯ ಸಂಚಿಗೆ ಬಲಿಯಾದ ಅಮಾಯಕನ ಗುರುತು ಇನ್ನೂ ಪತ್ತೆಯಾಗಬೇಕಾಗಿದೆ. ಲಾರಿ, ಕಾರು ವಶಕ್ಕೆ ಪಡೆದಿರುವ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ಅರಂಭಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular