Tuesday, December 3, 2024
Flats for sale
Homeರಾಜ್ಯಹಾಸನ : ಈ ವರ್ಷದ ಹಾಸನಾಂಬೆ ಉತ್ಸವಕ್ಕೆ ಇಂದು ತೆರೆ, ಮುಂದಿನ ವರ್ಷ ಹಾಸನಾಂಬೆ ದೇವಸ್ಥಾನ...

ಹಾಸನ : ಈ ವರ್ಷದ ಹಾಸನಾಂಬೆ ಉತ್ಸವಕ್ಕೆ ಇಂದು ತೆರೆ, ಮುಂದಿನ ವರ್ಷ ಹಾಸನಾಂಬೆ ದೇವಸ್ಥಾನ ಬಾಗಿಲು ತೆರೆಯುವ ದಿನಾಂಕ 09/10/2025.!

ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆ ಬಿದ್ದಿದೆ. ಮಧ್ಯಾಹ್ನ 12 ಗಂಟೆ ನಂತರ ಶಾಶ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಾಯಿತು. ಬಾಗಿಲು ಮುಚ್ಚುವ ಮುನ್ನಾ ದಿನವಾದ ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ವಿಶ್ವರೂಪ ದರ್ಶನದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಎಚ್.ಪಿ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ, ಆಡಳಿತಾಧಿಕಾರಿ ಮಾರುತಿ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಯಿತು. ಈ ಮೂಲಕ ಈ ವರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ.

ದೇವಾಲಯದ ಬಾಗಿಲು ಹಾಕುವ ಮುನ್ನ ದೇವಾಲಯದ ಒಳ ಹೊರಗೆ ಭಕ್ತರ ಜಾತ್ರೆಯೇ ನೆರೆದಿತ್ತು. ಈ ಬಾರಿ ಜಾತ್ರಾ ಮಹೋತ್ಸವ ಇತಿಹಾಸ ನಿರ್ಮಿಸಿದ್ದು, ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದೆ. ಹಾಸನಾಂಬೆ ದರ್ಶನೋತ್ಸವದ ತೆರೆ ಬಿದ್ದಿದ್ದು ವೀಕೆಂಡ್ ಜೊತೆಗೆ ಹಬ್ಬದ ರಜೆಯಿದ್ದಿದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು.

ಒಟ್ಟು ದಿನಗಳಲ್ಲಿ 18 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. 1000, 300 ರೂ. ವಿಶೇಷ ದರ್ಶನದ ಟಿಕೆಟ್‌ಗಳು, ಲಾಡು ಮಾರಾಟ ಹಾಗೂ ದೇವರ ಸೀರೆ ಮಾರಾಟದಿಂದ 8 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

ಹಾಸನಾಂಬೆ ಇತಿಹಾಸದಲ್ಲೇ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸಂಖ್ಯೆಯ ಭಕ್ತರಿಂದ ದೇವಿ ದರ್ಶನ ಹಾಗೂ ಅತಿ ಹೆಚ್ಚು ಆದಾಯ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದೆ. ನಿನ್ನೆ ರಾತ್ರಿಯೇ ಸಿದ್ಧೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೊಂಡೋತ್ಸವ ಜರುಗಿತು. ಮುಂಜಾನೆವರೆಗೂ ಭಕ್ತರಿಗೆ ದೇವಿ ಹಾಸನಾಂಬೆ ದರ್ಶನ ದೊರಕಿತ್ತು. 6 ಗಂಟೆ ಬಳಿಕ ಸಾರ್ವಜನಿಕ ದರ್ಶನಕ್ಕೆ ತೆರೆ ಎಳೆಯಲಾಯ್ತು. ಒಟ್ಟಿನಲ್ಲಿ ಅಕ್ಟೋಬರ್ 24 ರಿಂದ ಆರAಭಗೊAಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿAದ ಜರುಗಿದ್ದು, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಲಕ್ಷಾAತರ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular