ಹಾಸನ ಜಿಲ್ಲೆ: ಆಲೂರು ತಾಲ್ಲೂಕಿನ ಜಿಜಿ ಕೊಪ್ಪಲಿನ ಎತ್ತಿನಹೊಳೆ ಕಾಮಗಾರಿ ವಿರುದ್ಧ ಪ್ರತಿಭಟನಾ ಸ್ಥಳಕ್ಕೆ ಇಂದು ಮಾಜಿ ಸಚಿವ, ಹಾಲಿ ಶಾಸಕ ಹೆಚ್ ಡಿ ರೇವಣ್ಣ ಭೇಟಿ ನೀಡಿದ್ದರು.
ಸತತ ಎರಡು ವರ್ಷಗಳಿಂದ ನಡೆಯುತ್ತಿರುವ ಪ್ರತಿಭಟನೆ ನಡೆಯುತ್ತಿದ್ದು ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು.
ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು ಜಿ ಜಿ ಕೊಪ್ಪಲು, ಅಜ್ಜೇನಹಳ್ಳಿ, ಬೀರಕನಹಳ್ಳಿ, ಬೆಳ್ಳಾವರ, ಸಮುದ್ರವಳ್ಳಿ, ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು ಹೋಗಿದ್ದು ಬೇರೆ ಜಿಲ್ಲೆಗಳಿಗೆ ನೀರು ಒದಗಿಸುವ ಸಲುವಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಆದರೆ ಇಲ್ಲಿರುವ ರೈತರಿಗೆ ಅನ್ಯಾಯವಾಗುತ್ತಿರುವುದು ಮಾತ್ರ ಅಧಿಕಾರಿಗಳಿಗೆ, ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲ.ಈ ಕಾಮಗಾರಿ ಕೆಲಸದಿಂದ ಇಲ್ಲಿರುವ ಸ್ಥಳೀಯ ರೈತರಿಗೆ ಅಪಾರ ಸಂಕಷ್ಟ ಮತ್ತು ನಷ್ಟ ಉಂಟುಮಾಡಿದೆ. ಕಾರಣ ಭೂಮಿಯನ್ನು 120 ಹಾಗೂ 180 ಅಡಿ ಆಳ ಗುಂಡಿ ತೆಗೆದು ಸಿಡಿಮದ್ದು ಸಿಡಿಸುತ್ತಿರುವುದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಇವರ ಕೆಲಸದಿಂದ ರೈತರ ಜಮೀನಿನಲ್ಲಿದ್ದ ಬೋರುವೆಲ್ ಗಳಲ್ಲಿ ನೀರು ಇಲ್ಲಾದಂತಾಗಿದ್ದು, ರೈತರು ಕಣ್ಣು ಬಾಯಿ ಬಿಡುತ್ತಿದ್ದಾರೆ, ಈ ಉರಿ ಬೀಸಿಲಿನ ತಾಪಕ್ಕೆ ರೈತರು ಬೇಳೆದ ಬೇಳೆಗೆ ನೀರು ಇಲ್ಲದಂತಾಗಿದ್ದು, ಇತ್ತ ರೈತರಿಗೆ ಪರಿಹಾರವು ಇಲ್ಲದೆ, ಕುಡಿಯುವ ನೀರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ಧಾರೆ.ಇನ್ನೂ 50 ರಿಂದ 100 ಅಡಿ ಅಂತರದಲ್ಲಿ ಸುಮಾರು 40 ಕ್ಕೂ ಹೆಚ್ಚು ಮನೆಗಳಿದ್ದು ಸಿಡಿಮದ್ದು ಸ್ಫೋಟಕ್ಕೆ ಮನೆಗಳಿಗೂ ಹಾನಿಯಾಗಿದ್ದು ಜನರು ಸಂಕಷ್ಟಕ್ಕಿಡಾಗಿದ್ದಾರೆ ಎಂದು ಹೇಳಿದ್ದಾರೆ.
ಇದರ ಬಗ್ಗೆ ನಾನು ವ್ಯವಸ್ಥಾಪಕ ನಿರ್ದೇಶಕರು, CE, ಹಾಸನ ಜಿಲ್ಲಾಧಿಕಾರಿಗಳ ಜೊತೆ ಮಾತಾನಾಡಿ ಅಧಿಕಾರಿಗಳು ಹಾಗೂ ಇಲ್ಲಿಯ ಜನರನ್ನು ನಮ್ಮ ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನ್ಯಾಯದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.ಇಲ್ಲಿಯ ಜನರು ಹೇಳಿದಂತೆ, ಅಧಿಕಾರದ ದರ್ಪದಿಂದ ಪೊಲೀಸರಾಗಲಿ ಬೇರೆ ಅಧಿಕಾರಿಗಳಗಲಿ ಯಾರೂಕೂಡ ರೈತರಿಗೆ ತೊಂದರೆಕೊಡುವುದಾಗಲಿ, ಹೆದರಿಸುವುದಾಗಲಿ ಮಾಡಿದರೆ ನಾವು ಸಹಿಸುವುದಿಲ್ಲ. ಹಾಗೂ ರಾತ್ರೋ ರಾತ್ರಿ ಕೆಲಸ ಮಾಡಿ ಜನರಿಗೆ ಇಲ್ಲಸಲ್ಲದ ಅಶ್ವಸನೆ ನೀಡಿ ರೈತರಿಗೆ ಕಣ್ಣು ಒರೆಸುವ ಕೆಲಸ ಮಾಡಬಾರದು.ಅಂಥಹದೇನಾದರೂ ನನ್ನ ಗಮನಕ್ಕೆ ಬಂದರೆ ನಮ್ಮ ಎಲ್ಲಾ ಸುತ್ತಮುತ್ತಲಿನ ಹಳ್ಳಿಯ ಜನರು ಹಾಗೂ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರುಗಳು ಸೇರಿ ಉಗ್ರಹೋರಾಟ ಮಾಡುತ್ತೇವೆ. ಜನಸಾಮಾನ್ಯರಿಗೆ ತೊಂದರೆಯಾದರೆ, ಸಾರ್ವಜನಿಕರೊಡನೆ ಚೆಲ್ಲಾಟವಾಡಿದರೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ ಅವರನ್ನು ಬೇಕಾದರೆ ಅರೆಸ್ಟ್ ಮಾಡಲಿ ನಾನು ಬರ್ತೀನಿ ( ಶಾಸಕ ರೇವಣ್ಣ) ಕೂಡ ಭಯ ಪಡಬೇಡಿ ನಿಮ್ಮೊಂದಿಗೆ ನಾವಿದ್ದೇವೆ. ಈ ವಿಷಯದ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ.
ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.


