ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಳೇಬೀಡಿನಲ್ಲಿ ಆರೋಪಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಒಳಗಿನ ಅಧಿಕಾರ ಪೈಪೋಟಿ ಮತ್ತು ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟನ್ನು ತೀವ್ರವಾಗಿ ಟೀಕಿಸಿದರು.
ಕಳೆದ ಎರಡುವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಯಾವುದೇ ರೀತಿಯ ಅನುದಾನ ನೀಡಿಲ್ಲ. ಸರ್ಕಾರ ಯಾವ ದಿಕ್ಕಿಗೆ ಸಾಗುತ್ತಿದೆ ಎನ್ನುವುದು ಸ್ಪಷ್ಟವಾಗಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕೆಲವರು ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲು ನಡೆಯುತ್ತಿರುವ ಹೋರಾಟ ಎಲ್ಲರಿಗೂ ಗೋಚರವಾಗಿದೆ, ಎಂದು ವಿಜಯೇಂದ್ರ ಕಿಡಿಕಾರಿದರು.


