ಹಾಸನ : ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ.
ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬುವವರ ಮನೆಯಲ್ಲಿ ಮೂವರು ವಾಸವಿದ್ದು ಜುಬೇರ್ ಮನೆ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ನುಸುಳುಕೋರರು ಪಡೆದಿದ್ದು ಇವರಲ್ಲಿ ಪಶ್ಚಿಮಬಂಗಾಳದ ವಿಳಾಸವಿರುವ ಆಧಾರ್ ಕಾರ್ಡ್ ಇದ್ದು ಇವರು ಈ ಮೂಲಕ ಭಾರತಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದಾರೆಂದು ಮಾಹಿತಿ ದೊರೆತಿದೆ.
ಬಾಂಗ್ಲಾ ಪ್ರಜೆಗಳನ್ನುಡಿಸಿಆರ್‌ಬಿ ಪೊಲೀಸರು ಬಂಧಿಸಿದ್ದು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬಳಿಕ ಮೂವರನ್ನು ವಿಚಾರಣೆ ನಡೆಸುತ್ತಿದ್ದು ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.