Friday, July 31, 2026
Homeಜಿಲ್ಲೆಹಾಸನ : ನಿರ್ಲಕ್ಷ್ಯದ ಚಾಲನೆ : ಬಸ್ ನಿಲ್ದಾಣದಲ್ಲಿ ಕುಳಿತ್ತಿದ್ದ ವ್ಯಕ್ತಿಗೆ ಸಾರಿಗೆ ಬಸ್ ಡಿಕ್ಕಿ,ಸ್ಥಿತಿ...

ಹಾಸನ : ನಿರ್ಲಕ್ಷ್ಯದ ಚಾಲನೆ : ಬಸ್ ನಿಲ್ದಾಣದಲ್ಲಿ ಕುಳಿತ್ತಿದ್ದ ವ್ಯಕ್ತಿಗೆ ಸಾರಿಗೆ ಬಸ್ ಡಿಕ್ಕಿ,ಸ್ಥಿತಿ ಗಂಭೀರ.

ಹಾಸನ : ನಗರದ ಚನ್ನಪಟ್ಟಣದಲ್ಲಿರುವ ಸಾರಿಗೆ ಬಸ್ ನಿಲ್ದಾಣದಲ್ಲಿ ರಾತ್ರಿ ಸಂಭವಿಸಿದ ಆತಂಕಕಾರಿ ಘಟನೆಯಲ್ಲಿ, ಬಸ್‌ಗಾಗಿ ಕಾಯುತ್ತ ಕುಳಿತಿದ್ದ ವ್ಯಕ್ತಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿವೆ.

ಚಿಕ್ಕಮಗಳೂರು ಮೂಲದ ಮಂಜುನಾಥ್ ಎಂಬವರು ಬಸ್ ನಿಲ್ದಾಣದಲ್ಲಿ ಚಿಕ್ಕಮಗಳೂರಿಗೆ ತೆರಳಲು ಕಾಯುತ್ತ ಕುಳಿತಿದ್ದ ವೇಳೆ, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ KA-21 F-0151 ಸಂಖ್ಯೆಯ ಸಾರಿಗೆ ಬಸ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹಗಲು ವೇಳೆಯಲ್ಲಿ ಈ ಘಟನೆ ನಡೆದಿದ್ದರೆ ಇನ್ನಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಚಾಲಕನ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular