ಹಾಸನ : ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾ ಪೋಹಾ ರಾಜಕೀಯ ವಲಯ ದಿಂದ ಕೇಳಿ ಬರುತ್ತಿದೆ.
ಬಿಜೆಪಿಯ ನಾಯಕರಾಗಿರುವ ಪ್ರಮುಖ ತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ ಎನ್ನುವ ಅಸಮಾ ಧಾನದಿಂದ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರೀತಂ ಗೌಡ ಬಿಜೆಪಿ ಪಕ್ಷ ತೊರೆಯಲು ಸಿದ್ದರಾಗಿರುವುದಕ್ಕೆ ಸಾಕ್ಷಿ ಎನ್ನುವಂತೆ ಪ್ರೀತಂ ಗೌಡ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.
ಎಲ್ಲಿಯೂ ‘ವೇದಿಕೆಗಳಲ್ಲಿಯೂ ಹೆಚ್ಚು ಕಾಣಿಸಿ ಕೊಳ್ಳು ತ್ತಿಲ್ಲ. ಪಕ್ಷವನ್ನೂ ಹೊರತು ಪಡಿಸಿ ತನ್ನದೇ ಆದ ಕಾರ್ಯಕರ್ತರ ಬಲ ಹಾಗೂ ಸಂಘಟನೆ ಹೊಂದಿರುವ ಪ್ರೀತಂ ಗೌಡ ಸದ್ಯ ಪಕ್ಷಾಂತರಕ್ಕೆ ಸಜ್ಜಾದ ಬಗ್ಗೆ ಮಾತುಗಳು ಕೇಳಿಬರುತ್ತಿದೆ.ಬಿಜೆಪಿ ವಿರುದ್ಧ ಅದೇ ಪಕ್ಷದ ನಾಯಕ ಪ್ರೀತಂ ಗೌಡ ಅಸಮಾಧಾನಕ್ಕೆ ಪ್ರಮುಖ ಕಾರಣವೇ ಬಿಜೆಪಿ-ಜೆಡಿಎಸ್ ಮೈತ್ರಿ. ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ವಿರುದ್ಧ ಹೋರಾಡಿಕೊಂಡು ಹಾಸನದಲ್ಲಿ ಬಿಜೆಪಿ ಬಲಗೊಳಿಸಿದ್ದ ಪೀತಂ ಗೌಡಗೆ ಬಿಜೆಪಿ-ಜೆಡಿಎಸ್ ಮೈತ್ರಿ ನುಂಗಲಾರದ ತುತ್ತಾಗಿದೆ. ಹೀಗಾಗಿ ಇದೇ ಕಾರಣಕ್ಕೆ ಅವರು ಬಿಜೆಪಿ ತೊರೆದು ಸದ್ಯ ರಾಜ್ಯದಲ್ಲಿ ಆಡಳಿತರೂಢ ಪಕ್ಷವಾಗಿರುವ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರೀತಂ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡರೆ ಪಕ್ಷಕ್ಕೆ ಭಾರೀ ಲಾಭವಾಗಲಿದೆ. ಜೆಡಿಎಸ್ನ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಹಾಸನದಲ್ಲಿ ಕಾಂಗ್ರೆಸ್ ಮತ್ತೆ ಪಾರುಪತ್ಯ ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ಉತ್ಸುಕರಾಗಿದ್ದಾರೆ. ಇದೀಗ ಪ್ರೀತಂ ಗೌಡ ಪಕ್ಷ ಸೇರ್ಪಡೆಗೊಂಡರೆ ಕಾಂಗ್ರೆಸ್ಗೆ ಆನೆ ಬಲ ಬಂದಂತಾಗುತ್ತದೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರೀತಂ ಗೌಡ ಈವರೆಗೂ ಯಾವುದೇ ಅಧೀಕೃತ ಮಾಹಿತಿ ಬಹಿರಂಗಪಡಿಸಿಲ್ಲ.