ಹಾಸನ : ಬೆಂಗಳೂರಿನಿಂದ-ಮಂಗಳೂರಿಗೆ ಮದುವೆಗೆ ಹೊರಟಿದ್ದ ಅತಿಯಾದ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೆ ಕ್ಕೀಡಾಗಿದ್ದು ನಡೆದಿದ್ದು ,ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಬಸ್ ಮಂಗಳೂರುನಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದೆಂದು ತಿಳಿದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನಲ್ಲಿ ಚಾಲಕನ ಅತೀ ವೇಗದ ಚಾಲನೆಯಿಂದ ಒಂದು ಬದಿ ಬಸ್ ಪಲ್ಟಿಯಾಗಿದ್ದು ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.ಅಕ್ಕಪಕ್ಕದ ವಾಹನ ಸವಾರರಿಂದ ರಕ್ಷಣಾ ಕಾರ್ಯ ನಡೆದಿದೆ.ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


