ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.
ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ.