Thursday, July 23, 2026
Homeರಾಜ್ಯಹಾಸನ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.!

ಹಾಸನ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.!

ಹಾಸನ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲಯ ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ .

ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿಗಳು.

ಕಾರು ಚಾಲಕನಾಗಿದ್ದ ಶ್ರೀನಿವಾಸ್, ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ವೇತ ಕೆಲಸಮಾಡುತ್ತಿದ್ದರು,ಸಾಕಷ್ಟು ಸಾಲ ಮಾಡಿಕೊಂಡಿದ್ದ ಶ್ರೀನಿವಾಸ್ ಕುಟುಂಬ ಕಳೆದ ಮಂಗಳವಾರ ಕಾಣಿಯಾಗಿದ್ದರು ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಕುರುಹು ಸಿಗದ ಹಿನ್ನೆಲೆ ಕುಟುಂಬಸ್ಥರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು . ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಸ್ಮೀತಾ ಶವ ಪತ್ತೆಯಾಗಿದ್ದು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ಶವವನ್ನು ಹೊರ ತೆಗೆಡಿದ್ದು ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಮುಂದುವರಿದ ಶೋಧಕಾರ್ಯ ನಡೆಯುತ್ತಿದೆ.ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular