ಹಾಸನ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಕಾವ್ಯಶ್ರೀ ಎಂಬುವವರ ಪುತ್ರ ಸಚಿನ್ ಎಂದು ತಿಳಿದುಬಂದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದನು. ಈ ವೇಳೆ ಏಕಾಏಕಿ ಸಚಿನ್ಗೆ ಎದೆನೋವು ಕಾಣಿಸಿಕೊಂಡಿದೆ. ಇದ್ದಲ್ಲಿಯೇ ಕೊನೆಯುಸಿರೆಳೆದಿದ್ದೇನೆ.ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.
ಇತ್ತಿಚ್ಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಯುವಕರು ಮೃತಪಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿದೆ.


