Saturday, July 25, 2026
Homeರಾಜ್ಯಹಿರಿಯೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ .

ಹಿರಿಯೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ .

ಹಿರಿಯೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ವರದಿಯಾಗಿದೆ .

ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಮನೆ ಹಾಗೂ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.ಇನ್ನೋರ್ವ ಭ್ರಷ್ಟಾ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೂ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಎಸಿಎಫ್ ನಾಗೇಂದ್ರ ನಾಯ್ಕ್ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆಯಾಗಿದೆ ,ಸುಮಾರು 400ಗ್ರಾಂ ಚಿನ್ನ, ಬೆಳ್ಳಿ ಆಭರಣಗಳು ಎಂದು ಅಂದಾಜಿಸಲಾಗಿದೆ . ಹಾಗೂ ಒಂದೂವರೆ ಲಕ್ಷ ರೂಪಾಯಿ ನಗದನ್ನು ಲೋಕಾಯುಕ್ತಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸಿಎಫ್ ನಾಗೇಂದ್ರ ನಾಯ್ಕ್ ಮನೆಯಲ್ಲಿ ಪರಿಶೀಲನೆ ಮುಂದುವರೆಸಿದ್ದು ಮತ್ತಷ್ಟು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular