ಹುಬ್ಬಳ್ಳಿ : ಹುಬ್ಬಳ್ಳಿ ಸಮೀಪ ನೂಲ್ವಿ ಕ್ರಾಸ್ ಬಳಿ ಕಾರೊಂದು ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.


ಮೃತರನ್ನು ಹುಬ್ಬಳ್ಳಿ ಮೂಲದ ಹಿರೇಮಠ ಎಂಬ ಕುಟುಂಬ ಹಾವೇರಿ ಕಾರ್ಯಕ್ರಮ ಒಂದಕ್ಕೆ ತೆರಳಿ ವಾಪಸ್ಸು ಹುಬ್ಬಳ್ಳಿಗೆ ಬರುವಾಗ ನೂಲ್ವಿ ಕ್ರಾಸ್ ಬಳಿ ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೊರ್ವನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಸುಜಾತಾ ಹಿರೇಮಠ (60) ಗಾಯತ್ರಿ ಮಹಾಂತಿಮಠ (67) ಸಂಪತ್ತಕುಮಾರ (68) ಶಕುಂತಲಾ ಹಿರೇಮಠ (72) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೋಲೀಸ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


