ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತದಲ್ಲಿ ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.
ಟಾಟಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು ಕಾರು ರಿಜಿಸ್ಟ್ರೇಷನ್ ಬೆಂಗಳೂರು ಮೂಲದಾಗಿದೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.