ಹುಲಸೂರ : ಹುಲಸೂರ ಪೊಲೀಸ್ ಇಲಾಖೆ ಹಾಗೂ ಸಂಚಾರ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಹೆಲಮೇಟ್ ಧರಿಸದ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಬೈಕ್ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ ಹೆಲ್ಮೆಟ್ ಧರಿಸದೆ ಹಲವರು ಪ್ರಾಣ ಕಳೆದುಕೊಡಿದ್ದಾರೆ ಎಂದು ಪಿ.ಎಸ್. ಐ ನಾಗೇಂದ್ರ ತಿಳಿಸಿದ್ದಾರೆ.
ಹುಲಸೂರ ಮಾರ್ಗವಾಗಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಧಿಕವಾಗಿದ್ದು, ಕಾನೂನು ಹಾಗೂ ಸಂಚಾರ ನಿಯಮಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಜೊತೆ ಗಂಭೀರ ಗಾಯಗೊಂಡವರ ಸಂಖ್ಯೆ ಹೆಚ್ಚುತ್ತಿದೆ ಎಂದರು.
“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು. ಅತಿವೇಗ ಅಪಘಾತಕ್ಕೆ ಕಾರಣ. ರಸ್ತೆ ನಿಯಮ ಪಾಲಿಸಬೇಕು’ ಎಂದು ಸಲಹೆ ನೀಡಿದರು.”
ಪೊಲೀಸ್ ಸಿಬ್ಬಂದಿಯು ಶಿವಾಜಿ ವೃತ್ತ, ಸರಕಾರಿ ಪದವಿಪೂರ್ವ ಕಾಲೇಜು, ಬಸ್ ಸ್ಟ್ಯಾಂಡ್, ಮಾರುಕಟ್ಟೆ ರಸ್ತೆ ಮತ್ತಿತರ ಕಡೆಗಳಲ್ಲಿ ಹೆಲೆಟ್ ತಪಾಸಣೆ ನಡೆಸಿದರು.
ಇದೇ ಸಂದರ್ಭದಲ್ಲಿ ಪೀಎಸಐ ಸುಭಾಷ್ ಕುಷಣುರೆ, ಎಎಸಐ ಪಂಡಿತ್ , ಪೊಲೀಸ ಪೇದೆ ಶ್ರೀಶೈಲ ಗಿರಿ, ಬಸನ್ನಗೌಡ, ಶಂಕರಲಿಂಗ ಸೇರಿ ಪೊಲೀಸ ಸಿಬ್ಬಂದಿಗಳು ಉಪಸ್ಥಿತಿರಿದ್ದರು.


