ಹೈದರಾಬಾದ್ : ದೇಶದಲ್ಲಿ ಮುಸ್ಲಿಂ ಸಮುದಾಯ ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು “ಕಾಂಡೋಮ್” ಬಳಸುತ್ತಿದ್ದಾರೆ. ಈ ವಿಷಯ ಹೇಳಲು ತಮಗೆ ಯಾವುದೇ ನಾಚಿಕೆ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಲೋಕಸಭಾ ಅಭ್ಯರ್ಥಿ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ವಿಷಯ ಹೀಗಿರುವಾಗ ಮುಸ್ಲಿಮರು ಬಹುಸಂಖ್ಯಾತರಾಗುತ್ತಿದ್ದಾರೆ ಎಂದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹೈದರಾಬಾದ್ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ರಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ‘ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ. ಹೀಗಾಗಿ ‘ಜನಸಂಖ್ಯೆಯ ಬೆಳವಣಿಗೆ ಕುಸಿತ ಕಂಡಿದೆ ಎಂದಿದ್ದಾರೆ.
ಎಐಎಂಐಎಂ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ದೇಶದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚಿನ ಪ್ರಚಾರ ರ‍್ಯಾಲಿಯಲ್ಲಿ, ಓವೈಸಿ ಈ ವಿಷಯದಲ್ಲಿ ಮಾಡಿದ ಹೇಳಿಕೆಗಳನ್ನು ಎದುರಿಸಲು ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆಯ ಅತ್ಯಂತ ಚರ್ಚೆಯ ವಿಷಯವಾಗಿದೆ. ಬಿಜೆಪಿ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವೇಷದ ಗೋಡೆಯನ್ನು ಹಿಂದೂ ಸಮುದಾಯದಲ್ಲಿ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು “ಮುಸ್ಲಿಮರು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಾರೆ ಎಂಬ ಭಯವನ್ನು ನೀವು ಏಕೆ ಸೃಷ್ಟಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ. ಮುಸ್ಲಿಮರು ಜನಸಂಖ್ಯೆ ನಿಯAತ್ರಣಕ್ಕೆ ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ,” ಇದನ್ನು ಹೇಳಲು ನನಗೆ ನಾಚಿಕೆ ಇಲ್ಲ ಎಂದು ಹೇಳಿದ್ದಾರೆ.
ಈ ಬಾರಿ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಧವಿ ಲತಾ ಅವರಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಓವೈಸಿ, ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತ ಸಮುದಾಯವಾಗುತ್ತಾರೆ ಎಂಬ ಭಯವನ್ನು ಮೋದಿ ಹಿಂದೂಗಳಲ್ಲಿ ತುಂಬುತ್ತಿದ್ದಾರೆ ಎAದು ಆರೋಪಿಸಿದ್ದಾರೆ.
ಮುಸ್ಲಿಮರು ಗರಿಷ್ಠ ಸಂತಾನೋತ್ಪತ್ತಿ ಪ್ರಮಾಣ ಹೊಂದಿದ್ದಾರೆ ಎಂದು ಹೇಳುವ ಮೂಲಕ ಬಹುಸಂಖ್ಯಾತ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದ್ಧಾರೆ.