ಹೊಸಕೋಟೆ : ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ದರೋಡೆ ಮಾಡಿ, ಅವರನ್ನು ಒತ್ತೆ ಆಳಾಗಿರಿಸಿಕೊಂಡು ಹೆಚ್ಚಿಣ ಹಣಕ್ಕಾಗಿ ¨ಬೇಡಿಕೆಯಿಟ್ಟ ಘಟನೆ ನಡೆದಿದೆ . ಘಟನೆ ಸಂಬಂಧ ಓರ್ವ ಆ ರೋಪಿಯನ್ನುಪೊಲೀಸರು ಬಂಧಿಸಿದ್ದಾರೆ ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಕೆ.ಜಿ.ಹಳ್ಳಿಯ ಅ ರ್ಫಾತ್ ಅಹಮದ್ (೨೪) ಬಂಧಿತ ಆರೋಪಿ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಪ್ರತ್ಯೇಕ ಬೈಕ್ನಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಳಿ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು ವಾಪಸ್ಸಾಗುತ್ತಿದ್ದಾಗ ೬ ಗಂಟೆ ಸುಮಾರಿಗೆ ಮೇಡಹಳ್ಳಿ ಬಳಿ ಆರೇಳು ಮಂದಿ ದುಷ್ಕರ್ಮಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರಿಂದ 2 ಬೈಕ್ಗಳನ್ನು ಕಸಿದುಕೊಂಡು, ಮೊಬೈಲ್ ಕಿತ್ತುಕೊಂಡು 18೦೦ ರೂ. ಹಣವನ್ನು ಯುಪಿಐ ಮೂಲಕ ಬೇರೆ ಖಾತೆಗೆ ವರ್ಗಾಯಿಸಿಕೊಂಡು, ಸುಮಾರು 1 ಗಂಟೆಗಳ ಕಾಲ ಅವರನ್ನು ಒತ್ತೆಯಾಳಗಿಟ್ಟುಕೊಂಡಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಸ್ನೇಹಿತರಿಗೂ ಕರೆ ಮಾಡಿಸಿ ಹಣ ಸುಲಿದಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಎಚ್ಚೆತ್ತ ವಿದ್ಯಾರ್ಥಿಗಳ ಸ್ನೇಹಿತರು ಬಾಗಲೂರು ಪೊಲೀಸ್ ಠಾಣೆಗೆ ತೆರಳಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರನ್ನು ಕಂಡು ಆರೋಪಿಗಳು ವಿದ್ಯಾರ್ಥಿಗಳನ್ನು ಅಲ್ಲಿಯೇ ಬಿಟ್ಟು ಪರಾರಿ ಆಗಿದ್ದಾರೆ.


