Friday, March 13, 2026
Flats for sale
Homeದೇಶಹೊಸದಿಲ್ಲಿ : ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವೃದ್ಧ,ಆರೋಪಿಯನ್ನು ಹಿಡಿದ ಗ್ರಾಮಸ್ಥರು,ಕಾಮುಕ ಪೊಲೀಸ್ ವಶಕ್ಕೆ

ಹೊಸದಿಲ್ಲಿ : ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವೃದ್ಧ,ಆರೋಪಿಯನ್ನು ಹಿಡಿದ ಗ್ರಾಮಸ್ಥರು,ಕಾಮುಕ ಪೊಲೀಸ್ ವಶಕ್ಕೆ

ಹೊಸದಿಲ್ಲಿ : ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ವೃದ್ಧನೊಬ್ಬ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆಯು ದೇಶದಾದ್ಯಂತ ವೈರಲ್ ಆಗಿದ್ದು ಮಾನವಜನ್ಮಕ್ಕೆ ತಲೆತಗ್ಗಿಸುವಂತಾಗಿದ್ದು ಬಳಿಕ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಆರಂಭದಲ್ಲಿ ಶಂಕಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಆದರೆ ಸ್ವಲ್ಪ ಸಮಯದ ನಂತರ ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ರಾಂಪುರದ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಮನಕಲಕುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ವಿಜಯ್ ಸಿಂಗ್ ಅವರ ಸಾಕುಪ್ರಾಣಿ ಮೇಕೆಯನ್ನು ಆರೋಪಿ ಶೇರ್ ಸಿಂಗ್ ಅಮಾನುಷವಾಗಿ ಅತ್ಯಾಚಾರವೆಸಗಿದ್ದಾನೆ, ವಿಜಯ್ ಅವರ ಪತ್ನಿ ಮನೆಕೆಲಸಗಳಲ್ಲಿ ನಿರತರಾಗಿದ್ದಾಗ ಈ ಹೇಯ ಪ್ರಾಣಿ ಹಿಂಸೆಯನ್ನು ಎಸಗಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಘಟನಾ ಸ್ಥಳಕ್ಕೆ ಧಾವಿಸಿದ ಆಕೆ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮೇಕೆಯನ್ನು ನೋಡಿ ಕಂಗಾಲಾಗಿದ್ದಾರೆ. ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದು ಬಳಿಕ ಸ್ಥಳೀಯರು ಸೆರೆಹಿಡಿದಿದ್ದಾರೆ.

ಗ್ರಾಮಸ್ಥರು ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಶೇರ್ ಸಿಂಗ್‌ನನ್ನು ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದರು. ಪೊಲೀಸರು ತಕ್ಷಣವೇ BNS ಕಾಯಿದೆಯ 352 ಮತ್ತು 351(2) ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ, ಜೊತೆಗೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960 ರ ಸೆಕ್ಷನ್ 3 ಮತ್ತು 11 ರ ಅಡಿಯಲ್ಲಿ ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಪ್ರಕರಣ ಗ್ರಾಮಸ್ಥರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ ಮನುಷ್ಯನು ಮೃಗೀಯ ರೂಪತಾಳಿದ್ದು ಆಶ್ಚರ್ಯಕರವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular