ಹೊಸನಗರ : ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಹೊಸನಗರ ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಹೊಸನಗರದ ಅರಣ್ಯ ಇಲಾಖೆಯ ಅಧಿಕಾರಿಗಳು ಸೋಮವಾರ ರಾತ್ರಿ ಕೋಡೂರು ಗ್ರಾಮ ಪಂಚಾಯಿತಿ ಭಾಗದಲ್ಲಿ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಗಸ್ತು ತಿರುಗುತಿದ್ದಾಗ ಮರಳು ಸಾಗಾಣಿಕೆಗೆ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಪಡಿಸಿಕೊಡಿದ್ದಾರೆ.
ಹೊಸನಗರ ವಲಯ ಅರಣ್ಯಧಿಕಾರಿಗಳ ಕಛೇರಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಧಿಕಾರಿ ರಾಘವೇಂದ್ರ ಎಂ, ಸಿಬ್ಬಂದಿಗಳಾದ ಇಬ್ರಾಹಿಂ, ಶಶಿ, ರಮೇಶ್, ಚಾಲಕರದ ಪ್ರಮೋದ್,ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು