Sunday, March 8, 2026
Flats for sale
Homeರಾಜ್ಯಬೆಂಗಳೂರು : ಮಾಜಿ ಸಿ ಎಂ ಎಸ್​ಎಂ ಕೃಷ್ಣ ನಿಧನ ಹಿನ್ನೆಲೆ ಕರ್ನಾಟಕದಲ್ಲಿ 3 ದಿನ...

ಬೆಂಗಳೂರು : ಮಾಜಿ ಸಿ ಎಂ ಎಸ್​ಎಂ ಕೃಷ್ಣ ನಿಧನ ಹಿನ್ನೆಲೆ ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ..!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಇದರ ಹಿನ್ನಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಎಸ್ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮದ ಜೊತೆ ಅಂತ್ಯಸಂಸ್ಕಾರ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ನಾಳೆ(ಡಿ.11) ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಶೋಕಾಚರಣೆ ಇರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್ಎಂ ಕೃಷ್ಣ ವಿಧಿವಶರಾದ ಬೆನ್ನಲ್ಲೇ ಹುಟ್ಟೂರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular