Thursday, March 27, 2025
Flats for sale
Homeದೇಶಜಮ್ಮುವಿನ ಸಿದ್ರಾ ನಡೆದ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರ ಹತ !

ಜಮ್ಮುವಿನ ಸಿದ್ರಾ ನಡೆದ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರ ಹತ !

ಜಮ್ಮು : ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಿದ್ರಾ ಬೈಪಾಸ್ ಪ್ರದೇಶದ ತಾವಿ ಸೇತುವೆಯ ಬಳಿ ತೀವ್ರವಾದ ಮಂಜಿನ ನಡುವೆ ಬೆಳಿಗ್ಗೆ 7.30 ರ ಸುಮಾರಿಗೆ ಭಯೋತ್ಪಾದಕರ ಎನ್‌ಕೌಂಟರ್ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.

ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಇದರಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular