Saturday, July 11, 2026
Homeರಾಜ್ಯಬೆಂಗಳೂರು : 40 ಪರ್ಸೆಂಟ್ ಕಮಿಷನ್ ಆರೋಪ - 8000 ಪುಟಗಳ ಬೃಹತ್‌ದಾಖಲೆ ಸಲ್ಲಿಸಿದ ಗುತ್ತಿಗೆದಾರರ...

ಬೆಂಗಳೂರು : 40 ಪರ್ಸೆಂಟ್ ಕಮಿಷನ್ ಆರೋಪ – 8000 ಪುಟಗಳ ಬೃಹತ್‌ದಾಖಲೆ ಸಲ್ಲಿಸಿದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ.

ಬೆಂಗಳೂರು : ನಲವತ್ತು ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಬಿಜೆಪಿ ಹಾಗೂ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ೮೦೦೦ ಪುಟಗಳ ದಾಖಲೆಯನ್ನು ಸಲ್ಲಿಸಿದ್ದಾರೆ.

ನಿವೃತ್ತ ನ್ಯಾ.ಹೆಚ್.ಎಸ್.ನಾಗಮೋಹನ್ ದಾಸ್ ಸಮಿತಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಖಲೆಪತ್ರ, ಆಡಿಯೋ, ವಿಡಿಯೋಗಳನ್ನು ಸಲ್ಲಿಸಿದರು. ಹಿಂದಿನ ಸರ್ಕಾರದಲ್ಲಿ ನೀರಾವರಿ, ಕೃಷಿ, ಜಲಸಂಪನ್ಮೂಲ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ದಾಖಲೆ ಸಲ್ಲಿಸಲಾಗಿದೆ.

ಹಾಗೆಯೇ ಹಾಲಿ ಸರ್ಕಾರದಿಂದಲೂ ಬಿಲ್ ಪಾವತಿ ಮಾಡದ ಬಗ್ಗೆಯೂ ಕಮಿಷನ್ ಕೇಳುತ್ತಿರುವ ಕುರಿತಂತೆಯೂ ದಾಖಲೆಗಳನ್ನು ಸಲ್ಲಿಕೆ ಮಾಡಿರುವುದಾಗಿ ತಿಳಿಸಲಾಗಿದೆ.ಹಿರಿತನ ಆಧಾರದಲ್ಲಿ ಬಾಕಿ ಬಿಲ್ ಪಾವತಿ, ಕಮಿಷನ್ ನೀಡಿದವರಿಗೆ ಮಾತ್ರ ಬಾಕಿ ಹಣ ಪಾವತಿ ಮಾಡಲಾಗಿದೆ ಎಂಬ
ಆರೋಪ ಕೇಳಿಬಂದಿತ್ತು.

ಅಲ್ಲದೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಸೇರಿದಂತೆ ಹಲವರು ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಇದೀಗ ಕಮಿಷನ್ ಹಾಗೂ ಭ್ರಷ್ಟಾಚಾರ ವಿಚಾರವಾಗಿ ಬಿಜೆಪಿ ಹಾಗೂ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಪಣ್ಣ ದಾಖಲೆಪತ್ರಗಳನ್ನು ಸಮಿತಿಗೆ ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಈ ಸರ್ಕಾರದಲ್ಲೂ ಭ್ರಷ್ಟಾಚಾರ ದಾಖಲೆಗಳನ್ನು ಸಲ್ಲಿಸಿದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾಧ್ಯಮಗಳ ಜೊತೆ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಹಾಗೂ ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬAಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದರು.

ನೂತನ ಕಾಂಗ್ರೆಸ್ ಸರ್ಕಾರ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುತ್ತಿಲ್ಲ. ಬಿಲ್ ಬಿಡುಗಡೆ ಮಾಡಲು ಕಮಿಷನ್ಕೇ ಳಲಾಗುತ್ತಿದೆ ಎಂದು ಕೆಲವು ಮಂದಿ ಗುತ್ತಿಗೆದಾರರು ಆರೋಪ ಮಾಡಿದ್ದರು. ಇದು ರಾಜಕೀಯ ಸ್ವರೂಪ ಪಡೆದುಕೊಂಡಿತ್ತು

RELATED ARTICLES

LEAVE A REPLY

Please enter your comment!
Please enter your name here

Most Popular