Friday, March 13, 2026
Flats for sale
Homeರಾಜ್ಯಗೋಕಾಕ : ಭೀಕರ ಸಿಲಿಂಡರ್ ಸ್ಪೋಟಕ್ಕೆ ಹಾರಿಹೋದ ಮನೆಯ ಹಂಚುಗಳು.

ಗೋಕಾಕ : ಭೀಕರ ಸಿಲಿಂಡರ್ ಸ್ಪೋಟಕ್ಕೆ ಹಾರಿಹೋದ ಮನೆಯ ಹಂಚುಗಳು.

ಗೋಕಾಕ : ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿಹೋದ ಘಟನೆ ನಡೆದಿದೆ.

ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ರಾತ್ರಿ ಮಲಗಿರುವಾಗ ಸೋರಿಕೆ ಆಗಿರುವ ಘಟನೆ ನಡೆದಿದೆ.ಗ್ಯಾಸ್ ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸಿಲಿಂಡರ್ ಸ್ಪೋಟಗೊಂಡಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿಹೋಗಿವೆ.

9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ ರಾಜಶ್ರೀ ನಿರ್ವಾಣಿ (42) ಅಶೋಕ ನಿರ್ವಾಣಿ (45) ಸೋಮನಗೌಡ (44)ದೀಪಾ (42) ನವೀನ (14), ವಿದ್ಯಾ (13) ಬಸನಗೌಡ ನಿರ್ವಾಣಿ( 9 ತಿಂಗಳು) ಗಾಯಗಳಾಗಿವೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಿದ್ದಾರೆ.

ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular