Saturday, March 14, 2026
Flats for sale
Homeರಾಜಕೀಯಕಲಬುರಗಿ : ನಡು ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ.

ಕಲಬುರಗಿ : ನಡು ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ.

ಕಲಬುರಗಿ : ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್(21) ಎಂಬವರನ್ನು ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತರಾಗಿದ್ದ ಬಸವರಾಜ್ ಚೌಲ್ ಪುತ್ರ ಎಂದು ತಿಳಿದಿದೆ .ಯುವಕನನ್ನು ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular