ಬೆಳಗಾವಿ : ತಂದೆ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ತನ್ನ ತಂದೆಯಿಂದಲೇ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಯಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದು ಇದರ ಲಾಭ ಪಡೆದ ಆರೋಪಿ ತಂದೆ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಗರ್ಭಿಣಿ ಎಂದು ಆಶಾ ಕಾರ್ಯಕರ್ತೆಯರು ಖಚಿತಪಡಿಸಿದಾಗ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಅನುಮಾನ ಬಂದ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯೇ ತನ್ನ ಮೊಮ್ಮಗನ ತಂದೆ ಎಂಬುದು ದೃಢಪಟ್ಟಿದೆ.
ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ದರಾಮಪ್ಪ ಎನ್ಜಿಒ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಆಕೆಯ ತಂದೆಯೇ ಅಪರಾಧಿ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.


