ಲಾಸ್ ಎಂಜಲೀಸ್ : ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಖಾಸಗಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ರಜೆಯ ಹಿನ್ನೆಲೆ ಆಲಿವರ್ ತಮ್ಮ ಕುಟುಂಬದೊಂದಿಗೆ ಗ್ರೆನಡೈನ್ಸ್ನ ಬೆಕ್ವಿಯಾ ದ್ವೀಪದಿಂದ ಸೇಂಟ್ ಲೂಸಿಯಾಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಕೆರಿಬಿಯನ್ ಸಮುದ್ರದಲ್ಲಿ ಪತನಗೊಂಡಿದೆ. ಈ ಕುರಿತು ವಿಡಿಯೋ ವೈರಲ್ ಆಗಿದೆ.
ಇನ್ನು ಘಟನೆಯಲ್ಲಿ 51 ವರ್ಷದ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರಾದ ಮದಿತಾ ಮತ್ತು ಅನ್ನಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಪೈಲಟ್ ಕೂಡ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಾಗೂ ಮೀನುಗಾರರು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಜರ್ಮನಿಯಲ್ಲಿ ಜನಿಸಿದ ಆಲಿವರ್ ‘ದಿ ಗುಡ್ ಜರ್ಮನ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯವಾದರು. ಅವರು 2008 ರ ಆಕ್ಷನ್-ಕಾಮಿಡಿ ಚಿತ್ರ ‘ಸ್ಪೀಡ್ ರೇಸರ್’ ನಲ್ಲಿ ಜಾರ್ಜ್ ಕ್ಲೂನಿ ಅವರೊಂದಿಗೆ ನಟಿಸಿದ್ದರು. ಅಲಿವರ್ ತಮ್ಮ ವೃತ್ತಿಜೀವನದ ಆರಂಭದಲ್ಲಿ ಟಿವಿ ಶೋಗಳನ್ನು ಮಾಡಿದ್ದಾರೆ. ಅಲ್ಲದೆ, ಇದುವರೆಗೆ ಅವರು 60 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.