Friday, March 13, 2026
Flats for sale
Homeವಿದೇಶಢಾಕಾ : ನಾಲ್ಕನೇ ಅವಧಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಆಯ್ಕೆ.

ಢಾಕಾ : ನಾಲ್ಕನೇ ಅವಧಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಆಯ್ಕೆ.

ಢಾಕಾ: ಪ್ರತಿಪಕ್ಷಗಳ ಬಹಿಷ್ಕಾರದ ನಡುವೆಯೂ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷ ಸತತ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.

ಶೇಖ್ ಹಸೀನಾ ಐದನೇ ಬಾರಿಗೆ ಪ್ರಧಾನಿ ಹುದ್ದೆಗೇರಲಿದ್ದಾರೆ. ಬಾಂಗ್ಲಾ ಸಂಸತ್ತಿನ 300 ರಲ್ಲಿ 200 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯನ್ನು ಪ್ರಮುಖ ಪ್ರತಿಪಕ್ಷ ಬಿಎನ್‌ಪಿ ಮತ್ತು ಅದರ 15 ಮಿತ್ರಪಕ್ಷಗಳು ಬಹಿಷ್ಕರಿಸಿದ್ದವು. ಹೀಗಾಗಿ ಶೇ.41ರಷ್ಟು ಕಡಿಮೆ ಪ್ರಮಾಣದ ಮತದಾನವಾಗಿತ್ತು.

ನಿರೀಕ್ಷೆಯಂತೆ ಹಸೀನಾ ಅವರ ಅವಾಮಿ ಲೀಗ್ ಪಕ್ಷ 223 ಕ್ಷೇತ್ರಗಳಲ್ಲಿ ಜಯಿಸುವ ಮೂಲಕ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಮರಳಿದೆ. ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ 11 ಸ್ಥಾನ ಪಡೆಯುವ ಮೂಲಕ ಹಿನ್ನಡೆ ಅನುಭವಿಸಿದೆ. ಇತರ ಮೂರು ಪಕ್ಷಗಳು ತಲಾ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ. ಆದರೆ ಪಕ್ಷೇತರ ಅಭ್ಯರ್ಥಿಗಳು 62 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ.

ಈ ಚುನಾವಣೆ ನಕಲಿ ಎಂದು ದೂರಿದ್ದ ಬೇಗಂ ಖಲೀದಾ ಜಿಯಾ ನೇತೃತ್ವದ ಬಿಎನ್‌ಪಿ ಚುನಾವಣೆಯನ್ನು ಬಹಿಷ್ಕರಿಸಿತ್ತು. ಹಸೀನಾ ಸರ್ಕಾರದ ವಿರುದ್ಧ ಮಂಗಲವಾರದಿಂದಲೇ ಶಾಂತಿಯುತ ಚಳವಳಿ ನಡೆಸುವುದಾಗಿ ಜಿಯಾ ಪಕ್ಷ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular