ಹೈದರಾಬಾದ್: ತನ್ನ ಪತ್ನಿಗೆ ಬೇರೊಬ್ಬರ ಜತೆ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಪತಿ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ವಿಜಯ್ ಹಾಗೂ ಪುಷ್ಪಲತಾ ಮದುವೆಯಾಗಿ 15 ವರ್ಷಗಳಾಗಿದ್ದು ವಿಜಯ್ ಒಮ್ಮೆ ಕುಟುಂಬ ಬಿಟ್ಟು ಹೋಗಿದ್ದ, ಪುಷ್ಪಲತಾ ನಾಪತ್ತೆ ಪ್ರಕರಣ ದಾಖಲಿಸಿದ್ದಳು.ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದ ಪತಿ ಆಕೆಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿರುವ ಭಯಾನಕ ಘಟನೆ ವರದಿಯಾಗಿದೆ.
ಹೈದರಾಬಾದ್ನ ಅಬ್ದುಲ್ಲಾಪುರ್ ಮೆಟ್ ಜೆಎನ್ಎನ್ಯುಆರ್ಎಂ ಕಾಲೋನಿಯಲ್ಲಿ ಎರಡು ಬೆಡ್ರೂಮಿನ ಸರ್ಕಾರಿ ವಸತಿ ಗೃಹದಲ್ಲಿ ವಾಸವಿದ್ದ ಹಂತಕ, ಹೆಂಡತಿ ತಲೆಯನ್ನು ಕತ್ತರಿಸಿ ಮನೆಯಲ್ಲಿಯೇ ಇಟ್ಟುಕೊಂಡಿದ್ದ. ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಜಯ್ ಹಾಗೂ ಪುಷ್ಪಲತಾ ತನ್ನ ಸಹೋದರಿಯ ಹೊಸ ಮನೆಗೆ ಹೋಗಿದ್ದರು. ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ.ಇದೀಗ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


