ಮಂಡ್ಯ : ಮಂಡ್ಯ ಜಿಲ್ಲೆಯ ಮಾಣಿಕ್ಯನಹಳ್ಳಿ ಗ್ರಾಮದ ನಿವಾಸಿಯಾಗಿರುವ ಶಿಕ್ಷಕಿ ದೀಪಿಕಾಳ ಶವ ಪತ್ತೆಯಾಗಿದೆ ನೋಡಲು ಸುಂದರವಾಗಿದ್ದ ಶಿಕ್ಷಕಿ ಪ್ರೀತಿಯನ್ನು ನಿರಾಕರಿಸಿದ ಕಾರಣ ಇದೇ ಗ್ರಾಮದ ಓರ್ವ ಯುವಕ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ.
ಯುವಕ ಮೃತ ದೀಪಿಕಾಳಿಗೆ ಅಕ್ಕ ಅಕ್ಕ ಎನ್ನುತ್ತಲೆ ಹತ್ತಿರವಾಗಿದ್ದನು ಎಂದು ತಿಳಿದುಬಂದಿದೆ ಒಂದೇ ಊರಿನವನಾದ್ದರಿಂದ ದೀಪಿಕಾ ಆತನನ್ನು ಸಲುಗೆಯಿಂದ ಮಾತನಾಡಿಸುತ್ತಿದ್ದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಶ್ರೀರಂಗಪಟ್ಟಣದ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಹಾಗೂ ಯುವಕ ಜಗಳವಾಡುತ್ತಿದ್ದನ್ನು ಪ್ರವಾಸಿಗರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು 13 ಸೆಕೆಂಡ್‌ಗಳ ಈ ವಿಡಿಯೋವನ್ನು ಪ್ರವಾಸಿಗರು ಪೊಲೀಸರಿಗೆ ನೀಡಿದ್ದಾರೆ.
ದೀಪಿಕಾ ಮೇಲುಕೋಟೆಯ ಎಸ್ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು,ಜನವರಿ 20 ರಂದು ಶಾಲೆಗೆ ಹೋದವರು ಸಂಜೆ ಮನೆಗೆ ವಾಪಸ್ ಆಗಿಲ್ಲಇದರಿಂದ ಪೊಲೀಸರು ಶಿಕ್ಷಕಿ ದೀಪಿಕಾ ಅವರ ಮೊಬೈಲ್ ಪರಿಶೀಲಿಸಿದಾಗ ಕೊನೆಯದಾಗಿ ಕರೆ ಬಂದಿದ್ದು ಇದೇ ಯುವಕನದ್ದಾಗಿದೆ ಎಂದು ತಿಳಿದುಬಂದಿದೆ.ಅಕ್ಕ ಅಕ್ಕ ಎನ್ನುತ್ತ ಹೇಳುತಿದ್ದ ಯುವಕನೇ ದೀಪಿಕಾರನ್ನು ಕೊಲೆ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಯಾವಾಗ ಶಿಕ್ಷಕಿ ದೀಪಿಕಾ ಮೃತದೇಹ ಪತ್ತೆಯಾಯಿತು ಅಂದಿನಿಂದ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಅಲ್ಲದೆ ಇದರಿಂದ ಅನುಮಾನಗೊಂಡ ಪೊಲೀಸರು ಯುವಕನಿಗೆ ಬಲೆಬೀಸಿದ್ದಾರೆ. ಹುಡುಕಾಟ ನಡೆಸಿದ್ದಾರೆ. ಹೀಗೆ ನಿನ್ನೆ ಸಂಜೆ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಆಕೆಯ ಡಿಯೋ ಸ್ಕೂಟರ್ ಪತ್ತೆಯಾಗಿದೆ.
ಹೀಗೆ ಹುಡುಕಾಟ ನಡೆಸುತ್ತಿದ್ದ ಸಮಯದಲ್ಲಿ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಕಾಣಿಸಿದೆ. ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ತಹಶಿಲ್ದಾರ್ ಮೃತದೇಹದ ಹೊರತೆಗೆದಾಗ, ಶವ ದೀಪಿಕಾಳದ್ದಾಗಿದೆ. ಬಳಿಕ ಪೊಲೀಸರು ಮರಣೋತ್ತರ ಪರೀಕ್ಷೆಗೆ ಶವ ರವಾನೆ ಮಾಡಿದ್ದಾರೆ. ಆರೋಪಿ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


